150 ಕೋಟಿ ರೂ.! ‘ಟಾಕ್ಸಿಕ್’ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಪಡೆದ ರೆಮ್ಯುನೇಷನ್ ಕೇಳಿದ್ರೆ ಬೆಚ್ಚಿಬೀಳ್ತೀರಾ!

ಮುಖ್ಯಾಂಶಗಳು (Summary):
-
ಕೆಜಿಎಫ್ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರುವ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಸಂಭಾವನೆ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ.
-
ಮೂಲಗಳ ಪ್ರಕಾರ, ಈ ಚಿತ್ರಕ್ಕಾಗಿ ಯಶ್ ಬರೋಬ್ಬರಿ 150 ಕೋಟಿ ರೂ. ಡಿಮ್ಯಾಂಡ್ ಮಾಡಿದ್ದು, ಸಂಭಾವನೆ ಪಡೆಯುವ ಬದಲು ಸಹ-ನಿರ್ಮಾಪಕರಾಗಿ ಬಂಡವಾಳ ಹೂಡಿದ್ದಾರೆ ಎನ್ನಲಾಗಿದೆ.
-
ನಯನತಾರಾ, ಕಿಯಾರಾ ಅಡ್ವಾಣಿ ಹಾಗೂ ರುಕ್ಮಿಣಿ ವಸಂತ್ ನಾಯಕಿಯರಾಗಿರುವ ಈ ಮಾಸ್ ಆಕ್ಷನ್ ಸಿನಿಮಾ ಮಾರ್ಚ್ 19ರಂದು ತೆರೆಕಾಣಲಿದೆ.
ಸಾಮಾನ್ಯ ಕುಟುಂಬದಿಂದ ಬಂದು, ಟಿವಿ ಸೀರಿಯಲ್‌ಗಳಲ್ಲಿ ನಟಿಸುತ್ತಾ ಇಂದು ಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್ ಆಗಿ ಬೆಳೆದಿರುವವರು ನಮ್ಮ ರಾಕಿಂಗ್ ಸ್ಟಾರ್ ಯಶ್. ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ್ದ ಯಶ್, ಇದೀಗ ತಮ್ಮ ಮುಂದಿನ ಮೆಗಾ ಪ್ರಾಜೆಕ್ಟ್ ಮೂಲಕ ಅಬ್ಬರಿಸಲು ರೆಡಿಯಾಗಿದ್ದಾರೆ.
ಬಾಕ್ಸ್ ಆಫೀಸ್ ಸುಲ್ತಾನನಾಗಿ ಮೆರೆಯುತ್ತಿರುವ ಯಶ್ ಪ್ರಸ್ತುತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಚಿತ್ರದ ಗ್ಲಿಂಪ್ಸ್ ಮತ್ತು ಟೀಸರ್ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿವೆ. ಇದೀಗ ಗಾಂಧಿನಗರದ ಗಲ್ಲಿಗಳಲ್ಲಿ ಮತ್ತು ಟಾಲಿವುಡ್ ಅಂಗಳದಲ್ಲಿ ಯಶ್ ಅವರ ಸಂಭಾವನೆಯ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿದೆ!
ವರದಿಗಳ ಪ್ರಕಾರ, ಈ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್‌ಗಾಗಿ ಯಶ್ ಬರೋಬ್ಬರಿ 150 ಕೋಟಿ ರೂಪಾಯಿಗಳ ಬೃಹತ್ ಸಂಭಾವನೆ ನಿಗದಿ ಮಾಡಿದ್ದಾರಂತೆ! ಅಷ್ಟೇ ಅಲ್ಲ, ಈ ಚಿತ್ರಕ್ಕೆ ವೆಂಕಟ್ ಕೆ. ನಾರಾಯಣ್ ಜೊತೆ ಯಶ್ ಕೂಡ ಸಹ-ನಿರ್ಮಾಪಕರಾಗಿದ್ದಾರೆ. ಹೀಗಾಗಿ, ತಮ್ಮ 150 ಕೋಟಿ ರೂ. ಸಂಭಾವನೆಯನ್ನು ಪಡೆಯದೆ, ಅದನ್ನೇ ಸಿನಿಮಾದ ಮೇಲೆ ಹೂಡಿಕೆ ಮಾಡಿದ್ದಾರೆ ಎಂಬ ಗುಸುಗುಸು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಇದರಿಂದ ಅವರ ಒಟ್ಟು ಗಳಿಕೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಅಂದಹಾಗೆ, ಈ ಸಿನಿಮಾದಲ್ಲಿ ಬರೀ ಮಾಸ್ ಆಕ್ಷನ್ ಮಾತ್ರವಲ್ಲ, ಸ್ಟಾರ್ ನಟಿಯರ ದಂಡೇ ಇದೆ. ಸೌತ್ ಕ್ವೀನ್ ನಯನತಾರಾ, ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಹಾಗೂ ನಮ್ಮ ಸಪ್ತ ಸಾಗರದ ಬೆಡಗಿ ರುಕ್ಮಿಣಿ ವಸಂತ್ ಈ ಚಿತ್ರದಲ್ಲಿ ನಾಯಕಿಯರಾಗಿ ಮಿಂಚಲಿದ್ದಾರೆ.
ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ‘ಟಾಕ್ಸಿಕ್’ ಚಿತ್ರವು ಈದ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಥಿಯೇಟರ್‌ಗಳಿಗೆ ಲಗ್ಗೆ ಇಡಲಿದೆ. ಯೂಟ್ಯೂಬ್ ನಲ್ಲಿ ಈಗಾಗಲೇ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಈ ಚಿತ್ರ, ಥಿಯೇಟರ್‌ಗಳಲ್ಲೂ ಹೊಸ ಇತಿಹಾಸ ಸೃಷ್ಟಿಸುವುದು ಪಕ್ಕಾ ಎನ್ನುತ್ತಿದ್ದಾರೆ ಸಿನಿ ಪಂಡಿತರು.
